ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ'- ಮಮತಾ ಬ್ಯಾನರ್ಜಿ

11:28 AM Jul 14, 2024 IST | Bcsuddi
Advertisement

ಕೋಲ್ಕತ್ತ : ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ ಎಂಬುದನ್ನು ವಿಧಾನಸಭೆ ಉಪಚುನಾವಣೆ ಫಲಿತಾಂಶ ಸಾಬೀತು ಪಡಿಸಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

Advertisement

ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಟ್ರೆಂಡ್ ತುಂಬಾ ಸ್ಪಷ್ಟವಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಜನಾದೇಶ ಎನ್‌ಡಿಎ ಪರವಾಗಿ ಇರಲಿಲ್ಲಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಲ್ಲಿಯೂ ಟಿಎಂಸಿಯನ್ನು ಗೆಲ್ಲಿಸಿದ್ದಕ್ಕಾಗಿ ಜನರಿಗೆ ಧನ್ಯವಾದಗಳು. ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿಲ್ಲ ಎಂದರು.

ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಪಶ್ಚಿಮ ಬಂಗಾಳದಲ್ಲಿ 4, ಹಿಮಾಚಲ ಪ್ರದೇಶ 3, ಉತ್ತರಾಖಂಡ 2, ಪಂಜಾಬ್, ಮಧ್ಯ ಪ್ರದೇಶ, ಬಿಹಾರ ಮತ್ತು ತಮಿಳುನಾಡಿನಲ್ಲಿ ತಲಾ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಈ ಮೂಲಕ ಮೈತ್ರಿಕೂಟವು ಶೇ 51ರಷ್ಟು ಮತಗಳನ್ನು ಪಡೆದಿದೆ. ಎನ್‌ಡಿಎ ಶೇ 46 ರಷ್ಟು ಮತಗಳನ್ನು ಪಡೆದಿದೆ ಎಂದು ಹೇಳಿದರು.

 

Advertisement
Next Article