For the best experience, open
https://m.bcsuddi.com
on your mobile browser.
Advertisement

ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆಂಬ ಸಿಎಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

06:22 PM Dec 05, 2023 IST | Bcsuddi
ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆಂಬ  ಸಿಎಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು
Advertisement

ಬೆಳಗಾವಿ: ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ  ಕುಮಾರಸ್ವಾಮಿ ,ಇದು ಓಲೈಕೆ ಅಲ್ಲದೇ ಬೇರೇನು ಎಂದು ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ನಾಡಿನ ಸಿಎಂ ಆಗಿ ರಾಜ್ಯದ ಸರ್ವತೋಮುಖ ಜನರ ಅಭಿವೃದ್ಧಿ ಈ ಕುರಿತು ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿ,  ಸರ್ಕಾರ ಎಂದರೆ ಕೇವಲ ಒಂದು ಸಮಾಜವನ್ನು ಮಾತ್ರವೇ ಓಲೈಕೆ ಮಾಡೊದಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲ ಜನರ ಬದುಕು ಕಟ್ಟಲು ಈ ಸರ್ಕಾರ ಇರಬೇಕು. ಕಳೆದ ಬಜೆಟ್​ನಲ್ಲಿ ಇವರೆಷ್ಟು ಹಣ ಇಟ್ಟಿದ್ದರು ಅದನ್ನು ಮೊದಲು ಕೊಡಲಿ. ಬಳಿಕ ಮುಂದಿ‌ನ ವರ್ಷ 10 ಸಾವಿರ ಕೋಟಿ ಕೊಡಲಿ ಎಂದರು.

Advertisement

ಸಿದ್ದರಾಮಯ್ಯ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದಿದ್ದರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನು ಈ ಕುರಿತು ಸಿಎಂ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು, ನಾನು ಹೇಳಿದ್ದನ್ನು ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನು ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಹೇಳಿದ್ದರಲ್ಲಿ ವಾಟ್​​ ಇಸ್ ರಾಂಗ್ ಇನ್, ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಹೇಳಿದರು.

Author Image

Advertisement