For the best experience, open
https://m.bcsuddi.com
on your mobile browser.
Advertisement

ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳವು - ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

10:09 AM Jan 17, 2024 IST | Bcsuddi
ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳವು   ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Advertisement

ದಾಂಡೇಲಿ: ದಾಂಡೇಲಿ ನಗರದ‌ ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಂದ ರಾತ್ರಿ ವೇಳೆಯಲ್ಲಿ ಪೆಟ್ರೋಲ್ ಕಳ್ಳತನ ನಡೆಯುತ್ತಿದ್ದು, ಇದೀಗ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ನಸುಕಿನ ವೇಳೆಯಲ್ಲಿ ಮನೆ ಮುಂಭಾಗ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನಗಳಿಂದ ಇಬ್ಬರು ಯುವಕರು ಬಂದು ಪೆಟ್ರೋಲ್ ಕದಿಯುತ್ತಿರುವ ದೃಶ್ಯ ಅಲ್ಲೇ ಹತ್ತಿರದ ಮನೆವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿರುವ ಕಳ್ಳರನ್ನು ಹಿಡಿದು ಸೂಕ್ತ ರೀತಿಯಲ್ಲಿ ಪೊಲೀಸರು ಕ್ರಮವನ್ನು ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement

Author Image

Advertisement