ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಶೇ 81.15 ಮಂದಿ ಉತ್ತೀರ್ಣ.!

10:41 AM Apr 10, 2024 IST | Bcsuddi
Advertisement

 

Advertisement

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಂದಿದ್ದು, ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿ

 

Tags :
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಶೇ 81.15 ಮಂದಿ ಉತ್ತೀರ್ಣ.!
Advertisement
Next Article