ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದ್ವಿತೀಯ ಪಿಯು ಓದುವ ವಿದ್ಯಾರ್ಥಿಗಳು ಗಮನಿಸಬೇಕಾದ ಸುದ್ದಿ.!

08:10 AM Sep 13, 2024 IST | BC Suddi
Advertisement

ಬೆಂಗಳೂರು: ಇನ್ಮುಂದೆ ದ್ವಿತೀಯ ಪಿಯು ಪರೀಕ್ಷಾಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ನಿಯಮದಂತೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ.

Advertisement

ಇದುವರೆಗಿನ ಪರೀಕ್ಷೆಗಳಲ್ಲಿ 3 ಗಂಟೆ ಅವಧಿ ಇರುತ್ತಿತ್ತು. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನುಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆ 3 ಗಂಟೆ ಇದ್ದಾಗಲೂ ಪ್ರಶ್ನೆಗಳ ಓದಿಗೆ ಹೆಚ್ಚುವರಿಯಾಗಿ 15 ನಿಮಿಷ ನೀಡ- ಲಾಗುತ್ತಿತ್ತು.

ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023-24ರ ಸಾಲಿನ ಪ್ರಾಯೋಗಿಕ ಪರೀಕ್ಷೆ ಹಾಗೂ  ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ, ಪರೀಕ್ಷಾ ಅವಧಿಯನ್ನು ಕಡಿತ ಮಾಡಿರಲಿಲ್ಲ.

ಭೌತ ವಿಜ್ಞಾನ, ರಸಾಯನ ವಿಜ್ಞಾನ, ವಿದ್ಯುನ್ಮಾನ ವಿಜ್ಞಾನ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರು- ತ್ತವೆ. ಅವುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರಿಸಬೇಕು. 70 ಅಂಕಗಳಿಗೆ ಉತ್ತ- ರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು 105 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿ- ರುತ್ತವೆ. ಅವುಗಳಲ್ಲಿ 70 ಅಂಕಗಳಿಗಷ್ಟೇ ಉತ್ತರಿಸಬೇಕು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

Tags :
ದ್ವಿತೀಯ ಪಿಯು ಓದುವ ವಿದ್ಯಾರ್ಥಿಗಳು ಗಮನಿಸಬೇಕಾದ ಸುದ್ದಿ.!
Advertisement
Next Article