For the best experience, open
https://m.bcsuddi.com
on your mobile browser.
Advertisement

ದ್ವೇಷ ಸೃಷ್ಟಿಸುವ ವಿಡಿಯೊ ಪೋಸ್ಟ್‌: ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

01:59 PM Aug 30, 2024 IST | BC Suddi
ದ್ವೇಷ ಸೃಷ್ಟಿಸುವ ವಿಡಿಯೊ ಪೋಸ್ಟ್‌  ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ
Advertisement

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಪ್ರಕರಣ ರದ್ದು ಪಡಿಸುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು, ಇಂದು ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.

ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ದೂರು ನೀಡಿದ್ದರು.

Advertisement

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿಡುವಂತೆ ತೋರಿಸಲಾಗಿತ್ತು.ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡಲಾಗುತ್ತದೆ ಎಂದು ಬಿಂಬಿಸುವ ವಿಡಿಯೋ ತುಣಕು ಇರುವ ಪೋಸ್ಟ್‌ ಅನ್ನು ಬಿಜೆಪಿ ಅಪ್ಲೋಡ್‌ ಮಾಡಿತ್ತು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement