ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಧಾರವಾಡ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ಮಾಡಿದ ಪೊಲೀಸ್ ಆಯುಕ್ತೆ

11:19 AM Mar 16, 2024 IST | Bcsuddi
Advertisement

ಧಾರವಾಡ : ಧಾರವಾಡದ ಕೇಂದ್ರ ಕಾರಾಗೃಹದ ಮೇಲೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಶನಿವಾರ ಬೆಳ್ಳಂಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಕಾರಾಗೃಹದಲ್ಲಿ ಮೊಬೈಲ್ ಬಳಕೆ, ಗಾಂಜಾ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಸೇರಿದಂತೆ 80ಕ್ಕೂ ಹೆಚ್ಚು ಪೊಲೀಸರು ಏಕಾಏಕಿ ದಾಳಿ ನಡೆಸಿ ಕಾರಾಗೃಹದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಪೊಲೀಸರು ಕಾರಾಗೃಹದಲ್ಲಿ ಪರಿಶೀಲನೆ ನಡೆಸಿದ್ದು, ಗಾಂಜಾ ಹಾಗೂ ಇತರ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Advertisement
Next Article