ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಟ ಧ್ರುವ ಸರ್ಜಾ ಜಿಮ್‌ ಟ್ರೈನರ್ ಮೇಲೆ ಹಲ್ಲೆ

12:03 PM May 27, 2024 IST | Bcsuddi
Advertisement

ಬೆಂಗಳೂರು: ಸ್ಯಾಂಡಲ್‌ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಜಿಮ್‌ ಟ್ರೈನರ್ ಪ್ರಶಾಂತ ಮೇಲೆ ನಿನ್ನೆ (ಭಾನುವಾರ) ರಾತ್ರಿ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

Advertisement

ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ರಸ್ತೆಯಲ್ಲಿ ಪ್ರಶಾಂತ್ ನಡೆದು ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಪ್ರಶಾಂತ್ ಅವರಿಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಸಂಬಂಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement
Next Article