ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಮ್ಮ ಹೆಮ್ಮೆಯ ಸೇನೆಯನ್ನು ಡಿಕೆ ಶಿವಕುಮಾರ್ ಅಪಮಾನ ಮಾಡಿದ್ದಾರೆ'- ಹೆಚ್‌ಡಿಕೆ

02:12 PM Jul 22, 2024 IST | Bcsuddi
Advertisement

 

Advertisement

ಬೆಂಗಳೂರು: ಮಾನ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನು ಅಪಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ಅಂಕೋಲ ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು ಬರಬೇಕಿತ್ತು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದರು. ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು.

ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಇದು ದುರ್ದೈವದ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರ ಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಬರೆದುಕೊಂಡಿದ್ದಾರೆ.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ. ನಮ್ಮ ಸೇನೆ ನಮ್ಮ ಹೆಮ್ಮೆ ಎಂದು ಕಿಡಿಕಾರಿದ್ದಾರೆ

Advertisement
Next Article