For the best experience, open
https://m.bcsuddi.com
on your mobile browser.
Advertisement

ನವೆಂಬರ್‌ 2ರಂದು ದೆಹಲಿಗೆ ಬನ್ನಿ - ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

09:17 AM Nov 02, 2023 IST | Bcsuddi
ನವೆಂಬರ್‌ 2ರಂದು ದೆಹಲಿಗೆ ಬನ್ನಿ   ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್
Advertisement

ಬೆಂಗಳೂರು: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಬಿಜೆಪಿ ವರಿಷ್ಠರನ್ನು ನಾಳೆ (ನವೆಂಬರ್‌ 2ರಂದು) ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Author Image

Advertisement