ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಗಮಂಗಲ ಗಲಭೆ ಪ್ರಕರಣ: 54 ಆರೋಪಿಗಳ ಬಂಧನ

04:19 PM Sep 12, 2024 IST | BC Suddi
Advertisement

ನಾಗಮಂಗಲ : ಬುಧವಾರ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇ ಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

Advertisement

ಪ್ರತ್ಯಕ್ಷದರ್ಶಿಗಳು, ಅಂಗಡಿ, ಗ್ಯಾರೇ ಜ್ಗಳ ಮಾಲೀಕರು ಹಾಗೂ ಸ್ಥಳೀ ಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು ಎಂದರು.ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಕೋಮು ಸೌಹಾರ್ದ ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದ ದಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article