For the best experience, open
https://m.bcsuddi.com
on your mobile browser.
Advertisement

'ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು' – ಎಸ್‌ಟಿ ಸೋಮಶೇಖರ್‌

05:15 PM Jul 07, 2024 IST | Bcsuddi
 ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು  – ಎಸ್‌ಟಿ ಸೋಮಶೇಖರ್‌
Advertisement

ಮೈಸೂರು: ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ( ಮುಡಾ) ಅವ್ಯವಹಾರದ ವಿಚಾರ ನನ್ನ ಗಮನಕ್ಕೆ ಬಂದಿತ್ತು ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೊಸ ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಯುಕ್ತರು ಸಭೆ ಮಾಡದೆಯೇ ಸೈಟ್‌ಗಳನ್ನು ನೀಡಿದ್ದಾರೆ. 50:50 ಅನುಪಾತದಡಿ ನಿವೇಶನ ಕೊಡುವಾಗ ಸಭೆಯಲ್ಲಿ ಚರ್ಚೆ ನಡೆಸಬೇಕಿತ್ತು. ಆದ್ರೆ ಈ ನಿಯಮಗಳನ್ನು ಅಂದಿನ ಆಯುಕ್ತರು ಗಾಳಿಗೆ ತೂರಿದ್ದಾರೆ.. ಹೀಗಾಗಿ ಅಂದಿನ ಆಯುಕ್ತರನ್ನ ಬದಲಾಯಿಸುವಂತೆ ಸರ್ಕಾರಕ್ಕೆ ಹೇಳಿದ್ದೆ. ಆದರೆ ಜಾತಿಯ ಪ್ರಭಾವದಿಂದ ಅವರು ಉಳಿದುಕೊಂಡರು ಎಂದು ಹೇಳಿದರು.

ಅವತ್ತಿನ ದಿನ ಸರಿಯಾದ ಕ್ರಮ ಆಗಿದ್ದರೇ ಇಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲಿಲ್ಲ, ಈಗಲಾದರೂ ಈ ಬಗ್ಗೆ ವ್ಯವಸ್ಥಿತವಾಗಿ ತನಿಖೆಯಾಗಲಿ ಎಂದು ಮನವಿ ಮಾಡಿದ್ದಾರೆ.

Advertisement

ಅನಗತ್ಯವಾಗಿ ಮುಡಾ ಹಗರಣ ವಿಚಾರದಲ್ಲಿ ನನ್ನ ಹೆಸರು ತರಬೇಡಿ. ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಒಂದೇ ಒಂದು ನಿವೇಶನ ನನ್ನ ಹೆಸರಿನಲ್ಲಿ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಈ ವಿಚಾರದಲ್ಲಿ ನನ್ನ ಹೆಸರು ತರಬೇಡಿ ಎಂದು ಹೇಳಿದ್ದಾರೆ.

ಮುಡಾದ ಪ್ರತಿ ಸಭೆಯಲ್ಲೂ ಸ್ಥಳೀಯ ಶಾಸಕರ ಫೈಲ್‌ಗಳೇ ಇರುತ್ತಿತ್ತು. ಶಾಸಕರ ಹೆಸರಿನ ಫೈಲ್‌ಗಳು ಚರ್ಚೆಯಾಗದೇ ಪಾಸ್‌ ಆಗುತ್ತಿತ್ತು. ಮುಡಾ ಸಭೆಯ ಬಹುತೇಕ ಫೈಲ್‌ಗಳು ಶಾಸಕರಿಗಳಿಗೆ ಸೇರಿದ್ದವು. ಅದಕ್ಕಾಗಿಯೇ ಮುಡಾ ಸದಸ್ಯರಾಗಲು ಬೇರೆ ಜಿಲ್ಲೆಯ ಪರಿಷತ್ ಸದಸ್ಯರು ವಾಸ ಸ್ಥಳವನ್ನ ಮೈಸೂರಿಗೆ ಕೊಡುತ್ತಿದ್ದರು. ಈ ಮಟ್ಟಕ್ಕೆ ಇಲ್ಲಿಯ ಶಾಸಕರಗಳು ಲಾಭಿ ಮಾಡುತ್ತಾರೆ. ಮುಡಾ ಇರುವುದು ಜನ ಸಾಮಾನ್ಯರ ಅಭಿವೃದ್ಧಿಗೋಸ್ಕರ. ಆದರೆ ಇಲ್ಲಿ ಆಗುತ್ತಿರುವುದು ಏನು? ಈ ಬೋರ್ಡ್ ವ್ಯವಸ್ಥೆ ಬದಲಾಗಬೇಕು ಎಂದು ಸೋಮಶೇಖರ್‌ ಹೇಳಿಕೆ ನೀಡಿದ್ದಾರೆ.

Author Image

Advertisement