ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನಾನು ಕೃಷಿ ಜತೆಗೆ ಉದ್ಯಮ ನಡೆಸುತ್ತಿದ್ದೇನೆ, ಕುಮಾರಣ್ಣ ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ?': ಡಿಸಿಎಂ ವಾಗ್ದಾಳಿ

09:36 AM Aug 05, 2024 IST | BC Suddi
Advertisement

ಚನ್ನಪಟ್ಟಣ: “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹರಿಹಾಯ್ದರು.

Advertisement

ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ನೀವು ರಾಮನಗರದಲ್ಲಿ ಉತ್ತರ ನೀಡಬೇಕು. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲುಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಸವಾಲೆಸೆದರು.

“ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ”

“ನನ್ನ ಮೇಲೆ, ನನ್ನ ಧರ್ಮಪತ್ನಿ, ನನ್ನ ಸಹೋದರಿ, ನನ್ನ ಸಹೋದರನ ಮೇಲೆ ನೀವು ಕೇಸ್ ದಾಖಲಿಸಿ ಏನು ಮಾಡಿದಿರಿ? ಏನು ಮಾಡಲು ಆಗಿಲ್ಲ. ಮಿಲಿಟರಿಯವರು ಬಂದು ನನ್ನನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ನೀನು ಹೇಳಿದ್ದೀಯಾ. ಹಾಗಿದ್ದರೆ ನಾನು ಜೈಲಲ್ಲಿ ಇದ್ದಾಗ ಯಾಕೆ ಬಂದು ನನ್ನನ್ನು ನೋಡಿದೆ? ನನ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಅದು ಗೊತ್ತಿದೆಯೇ? ನನ್ನ ಕುಟುಂಬದವರ ಮೇಲೆ ಹಾಕಿಸಿದ್ದ ಕೇಸು ವಜಾ ಆಗಿದೆ ಗೊತ್ತಿದೆಯಾ?” ಎಂದು ಕುಟುಕಿದರು.

“ನಾನು ನಿನ್ನ ಡಿನೋಟಿಫಿಕೇಶನ್ ಪ್ರಕರಣ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಗಣಿ ಕೇಸ್ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಕುಟುಂಬದವರ ಆಸ್ತಿ ಇನ್ನು ಬಿಡುಗಡೆ ಮಾಡಿಲ್ಲ. ಪಟ್ಟಿ ಬಿಡುಗಡೆ ಮಾಡುತ್ತೇನೆ” ಎಂದು ಸವಾಲೆಸೆದರು.

 

Advertisement
Next Article