ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ'- ಪ್ರದೀಪ್ ಈಶ್ವರ್

12:02 PM Jun 14, 2024 IST | Bcsuddi
Advertisement

ಚಿಕ್ಕಬಳ್ಳಾಪುರ: ಸವಾಲು ಸ್ವೀಕರಿಸದ್ದಕ್ಕೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.

Advertisement

ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ ಅವರು ನನ್ನ ಸವಾಲು ಸ್ವೀಕರಿಸಿಲ್ಲ. ನನ್ನ ಸವಾಲು ಸ್ವೀಕರಿಸಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಎಂದು ಕಾಯುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ನೀಡುವುದಿಲ್ಲ ಎಂದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ಕೊಡ್ತೇನೆ ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಆದರೆ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ ಅವರು 20,941 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಸುಧಾಕರ್ ಗೆಲುವು ಸಾಧಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.

Advertisement
Next Article