ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನಾಳೆ ರಾಜ್ಯ ಸರ್ಕಾರದ ಆಶಾಕಿರಣ ಯೋಜನೆಗೆ ಸಿಎಂ ಚಾಲನೆ' - ದಿನೇಶ್ ಗುಂಡೂರಾವ್

05:19 PM Feb 17, 2024 IST | Bcsuddi
Advertisement

ಮಂಗಳೂರು: ನಾಳೆ ಹಾವೇರಿಯಲ್ಲಿ ರಾಜ್ಯ ಸರ್ಕಾರದ 'ಆಶಾಕಿರಣ' ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆಶಾಕಿರಣ' ಯೋಜನೆಯು 'ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ' ಎಂಬ ಧ್ಯೇಯ ವಾಕ್ಯದೊಂದಿಗೆ ಜಾರಿಯಾಗುತ್ತದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ಮಾಡಲಾಗುತ್ತೆ. ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ ಎಂದು ಹೇಳಿದರು.

ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಆಶಾಕಿರಣ ಯೋಜನೆಯನ್ನು ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ, ಹಾವೇರಿ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುತ್ತಿದೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಈ ಯೋಜನೆ ಪ್ರಾರಂಭವಾಗುತ್ತದೆ. ಮುಂಬರುವ ದಿನಗಳಲ್ಲಿ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಎಲ್ಲಾ ವಯೋಮಾನದವರ ಪ್ರಾಥಮಿಕ ಹಂತದ ಕಣ್ಣಿನ ತಪಾಸಣೆ ನಡೆಸುತ್ತಾರೆ ಎಂದು ಅವರು ತಿಳಿಸಿದರು.

Advertisement
Next Article