For the best experience, open
https://m.bcsuddi.com
on your mobile browser.
Advertisement

'ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ' - ಡಿಕೆಶಿ

01:25 PM Jan 28, 2024 IST | Bcsuddi
 ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ    ಡಿಕೆಶಿ
Advertisement

ಬೆಂಗಳೂರು: ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಬೇಕೆಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು.ಹಾಗಾಗಿ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು.

ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು ಎಂದು ತಿಳಿಸಿದರು.

Advertisement

Author Image

Advertisement