ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನೀಟ್ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯಿತಿ ನೀಡಬೇಕು'- ನಟ ವಿಜಯ್

04:11 PM Jul 03, 2024 IST | Bcsuddi
Advertisement

ಚೆನ್ನೈ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ (ನೀಟ್) ತಮಿಳುನಾಡಿಗೆ ವಿನಾಯಿತಿ ನೀಡಬೇಕು ಎಂದು 'ತಮಿಳಗ ವೆಟ್ರಿ ಕಳಗಂ' ಪಕ್ಷದ ನಾಯಕ, ನಟ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

Advertisement

ದೇಶದ ಜನರು 'ನೀಟ್' ಪರೀಕ್ಷೆ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಪರೀಕ್ಷೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ 'ನೀಟ್' ಪರೀಕ್ಷೆಯಿಂದ ವಿನಾಯಿತಿ ಪಡೆಯುವುದು ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾದ 'ನೀಟ್' ವಿರುದ್ಧದ ನಿರ್ಣಯವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ತಮಿಳುನಾಡಿನ ಜನರ ಭಾವನೆಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳುತ್ತೇನೆ. ಸಂವಿಧಾನದ ಕೆಲವು ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ವಿಜಯ್ ಹೇಳಿದ್ದಾರೆ.

ತಮಿಳುನಾಡು ವಿದ್ಯಾರ್ಥಿಗಳಿಗೆ ನೀಟ್‌ನಿಂದ ವಿನಾಯಿತಿ ನೀಡುವ ಸಂಬಂಧ ಇತ್ತೀಚೆಗೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಈ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಆ‌ರ್.ಎನ್.ರವಿ ಅವರು ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಡಿಎಂಕೆ ಇತ್ತೀಚೆಗಷ್ಟೇ ಕಿಡಿಕಾರಿತ್ತು. ಇದರ ಬೆನ್ನಲ್ಲೇ ಈಗ ಸಿಎಂ ಸ್ಟಾಲಿನ್ ಅವರು ಕೂಡ ಪ್ರಧಾನಿ ಬಳಿ ತಮ್ಮ ಬೇಡಿಕೆ ಮುಂದಿಟ್ಟಿದ್ದರು.

 

Advertisement
Next Article