For the best experience, open
https://m.bcsuddi.com
on your mobile browser.
Advertisement

ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ತಮಿಳು ನಟ ದಳಪತಿ ವಿಜಯ್ ಎಂಟ್ರಿ

03:20 PM Feb 02, 2024 IST | Bcsuddi
ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ತಮಿಳು ನಟ ದಳಪತಿ ವಿಜಯ್ ಎಂಟ್ರಿ
Advertisement

ಚೆನೈ: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ "ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ" ಎಂದರು.

ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.

Advertisement

Author Image

Advertisement