ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನೇಜಾರು ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಸಿಎಂಗೆ ಮನವಿ

05:50 PM Dec 12, 2023 IST | Bcsuddi
Advertisement

ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಹಾಗೂ ಮುಸ್ಲಿಮ್ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಇಂದು ಬೆಳಗಾವಿಯಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

Advertisement

ಈ ಭೀಕರ ಹತ್ಯಾಕಾಂಡವು ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಉಡುಪಿಯ ಪೊಲೀಸ್ ಇಲಾಖೆ ಮುತುವರ್ಜಿ ವಹಿಸಿ ತ್ವರಿತಗತಿಯಲ್ಲಿ ರಹಸ್ಯವನ್ನು ಬೇಧಿಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಜಿಲ್ಲೆಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕ ಅಪರಾಧ ವಾಗಿದ್ದು, ಜಿಲ್ಲೆಯ ಜನರಲ್ಲಿ ಅಭದ್ರತೆಯ ಭಾವನೆ ಮೂಡಿಸಿದೆ. ಈ ಕ್ರೂರ ಅಪರಾಧ ಪ್ರಕರಣಕ್ಕೆ ರಾಜ್ಯದ ಘನ ಸರಕಾರವು ನ್ಯಾಯಪೂರ್ಣ ತಾರ್ಕಿಕ ಅಂತ್ಯವನ್ನು ಅತ್ಯಂತ ಶೀಘ್ರಗತಿಯಲ್ಲಿ ಕಲ್ಪಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವುದು ಅತ್ಯಂತ ಅಗತ್ಯದ ಕರ್ತವ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯ ವನ್ನು ಸ್ಥಾಪಿಸಬೇಕು. ಈ ಪ್ರಕರಣದಲ್ಲಿ ಆರೋಪಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾದ ಅಥವಾ ಸಹಕರಿಸಿರಬಹುದಾದ ಇತರರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement
Next Article