For the best experience, open
https://m.bcsuddi.com
on your mobile browser.
Advertisement

ನೇಹಾ ಕೊಲೆ ವೈಯಕ್ತಿಕ, ಇಂತಹ ಘಟನೆಗಳು ಆಕಸ್ಮಿಕ - ಸಿಎಂ, ಗೃಹ ಸಚಿವರ ಹೇಳಿಕೆಗೆ ಆಕ್ರೋಶ

09:29 AM Apr 20, 2024 IST | Bcsuddi
ನೇಹಾ ಕೊಲೆ ವೈಯಕ್ತಿಕ  ಇಂತಹ ಘಟನೆಗಳು ಆಕಸ್ಮಿಕ   ಸಿಎಂ  ಗೃಹ ಸಚಿವರ ಹೇಳಿಕೆಗೆ ಆಕ್ರೋಶ
Advertisement

ಬೆಂಗಳೂರು : ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ.

ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಹೇಳಿದ್ದಾರೆ. ಇನ್ನು, ಇತ್ತ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು.

Advertisement

ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ತಿಳಿಸಿದ್ದಾರೆ. ಇನ್ನು, ಗೃಹ ಸಚಿವರ ಈ ಹೇಳಿಕೆಗೆ ಸ್ವತಃ ನೇಹಾ ತಂದೆ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮಗಳು ಆತನನ್ನು ಪ್ರೀತಿ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಜನ ಕೂಡಾ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳಿಗೆ ಕೆಂಡ ಕಾರುತ್ತಿದ್ದಾರೆ.

Author Image

Advertisement