For the best experience, open
https://m.bcsuddi.com
on your mobile browser.
Advertisement

ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್ ಗಾಂಧಿಗೆ ನೋಟಿಸ್ ನೀಡಲು ಇಡಿ ಸಿದ್ಧತೆ

03:21 PM Aug 12, 2024 IST | BC Suddi
ನ್ಯಾಷನಲ್ ಹೆರಾಲ್ಡ್ ಕೇಸ್  ರಾಹುಲ್ ಗಾಂಧಿಗೆ ನೋಟಿಸ್ ನೀಡಲು ಇಡಿ ಸಿದ್ಧತೆ
Advertisement

ನವದೆಹಲಿ : ಕಾಂಗ್ರೆಸ್ ನಡೆಸುತ್ತಿದ್ದ ನ್ಯಾಷನಲ್ ಹೆರಾಲ್ಡ್ ಪ್ರತಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಗಳು, ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿಗೆ ನೊಟೀಸ್ ನೀಡಲು ಜಾರಿ ನಿರ್ದೇಶನಾಲಯ (ಇಡಿ) ಸಿದ್ಧತೆ ನಡೆಸಿದೆ.

ನೊಟೀಸ್ ನೀಡುವ ಮೂಲಕ ಇಡಿಯು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಶೀಘ್ರದಲ್ಲೇ ಕರೆಸಿಕೊಳ್ಳಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಸಂಸ್ಥೆ ಈಗಾಗಲೇ 751 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದಕ್ಕೂ ಮೊದಲು 2022ರ ಜೂನ್ ನಲ್ಲಿ, ಇಡಿ 4 ಸಭೆಗಳಲ್ಲಿ ರಾಹುಲ್ ಗಾಂಧಿಯನ್ನು ಸುಮಾರು 40 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಎಐಸಿಸಿ ಎಜೆಎಲ್‌ಗೆ ನೀಡಿದ 90.21 ಕೋಟಿ ರೂಪಾಯಿಗಳ ಸಾಲ ಮತ್ತು ಮುಂಬೈನಲ್ಲಿನ ಆಸ್ತಿಯ ಅಭಿವೃದ್ಧಿಗೆ ಸಂಬಂಧಿಸಿದ ವ್ಯವಹಾರಗಳ ಬಗ್ಗೆಯೂ ಇಡಿ ವಿಚಾರಣೆ ನಡೆಸಿತ್ತು.

Advertisement

2022ರ ಜುಲೈನಲ್ಲಿ 3 ದಿನಗಳ ಕಾಲ ಸುಮಾರು 11 ಗಂಟೆಗಳ ಕಾಲ ಸೋನಿಯಾ ಗಾಂಧಿಯವರನ್ನೂ ಈ ವಿಷಯದಲ್ಲಿ ವಿಚಾರಣೆ ನಡೆಸಲಾಯಿತು. ಇನ್ನು ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆಯು ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದೆಯೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

Author Image

Advertisement