ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ': ಸಚಿವ ಜಮೀರ್ ಖಾನ್ ಸ್ಪಷ್ಟನೆ

12:09 PM Nov 18, 2023 IST | Bcsuddi
Advertisement

ಬೆಂಗಳೂರು: ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

Advertisement

ಈ ಬಗ್ಗೆ ಎಕ್ಸ್ ಮಾಡಿದ ಅವರು, ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸ ದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, BJP, JDS ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ.

ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಪ್ರಶ್ನಿಸಿದ್ದಾರೆ.

Advertisement
Next Article