ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

07:45 AM May 01, 2024 IST | Bcsuddi
Advertisement

 

Advertisement

ಚಿತ್ರದುರ್ಗ: 2024-25ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು "ಆಯ್ಕೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 5ನೇ ತರಗತಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಆನ್‍ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಮೇ 9 ರಿಂದ ಮೇ21 ರ ವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‍ಲೈನ್ ನೊಂದಣಿ ಪ್ರಕ್ರಿಯೆಯು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯ ಕಛೇರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯ ಕಛೇರಿ ವೇಳೆಯಲ್ಲಿ ನೊಂದಣಿ ಮಾಡಲಾಗುವುದು. ಸಂಬಂಧಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ಪೆÇೀಷಕರು ಸದರಿ ಇಲಾಖಾ ಕಛೇರಿಗಳಲ್ಲಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಸುವಂತೆ ಸೂಚಿಸಿದೆ. ಮೇ 21 ರ ಕೊನೆಯ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಷರತ್ತುಗಳು: ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು. ನಿಗಧಿಪಡಿಸಲಾದ ಗುರಿಯಲ್ಲಿ ಬಾಲಕಿಯರಿಗೆ ಶೇ50ರಷ್ಟು ಮೀಸಲಾತಿ ಇರುತ್ತದೆ. ವಿದ್ಯಾರ್ಥಿಗಳು ಪ್ರತಿಷ್ಟಿತ ಶಾಲೆಗಳ ಆಯ್ಕೆ ಕೋರಿ ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು. ಒಂದೇ ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸಲಾಗುವುದು. 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಪೆÇೀಷಕರು ನಿಗಧಿತ ಅರ್ಜಿಯೊಂದಿಗೆ 04 ಪಾರ್ಸ್ ಪೆÇೀರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ (ಠಿಡಿogಡಿess ಛಿಚಿಡಿಜ) ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್. ಇತ್ಯಾದಿ ಅಗತ್ಯ ನಕಲು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೇಶ್ ಹೆಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Advertisement
Next Article