ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪಾಕ್ ಪರ ಘೋಷಣೆ ಕೂಗಿದ ಆರೋಪಿಗೆ ಜಾಮೀನು- ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ

01:34 PM Oct 17, 2024 IST | BC Suddi
Advertisement

ಜಬಲಪುರ : ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರದಂದು ಭೋಪಾಲ್ ಪೊಲೀಸ್ ಠಾಣೆಯ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವಂತೆ ಆದೇಶ ಹೊರಡಿಸಿದೆ.

Advertisement

ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಫೈಝಲ್ ಅಲಿಯಾಸ್ ಫೈಜಾನ್ ವಿರುದ್ಧ ಕಳೆದ ಮೇನಲ್ಲಿ ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಡಿ.ಕೆ.ಪಲಿವಾಲ್ ಅವರು, ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ೫೦ ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೌಲ್ಯಕ್ಕೆ ಒಬ್ಬರ ಭದ್ರತೆ ಒದಗಿಸಬೇಕು ಎಂಬ ಷರತ್ತು ವಿಧಿಸಿದ್ದಾರೆ.

ತಾನು ಹುಟ್ಟಿ ಬೆಳೆದ ದೇಶದ ವಿರುದ್ಧ ಬಹಿರಂಗವಾಗಿ ಘೋಷಣೆಗಳನ್ನು ಆರೋಪಿ ಕೂಗಿದ್ದಾನೆ. ವಿಚಾರಣೆ ಮುಗಿಯುವರೆಗೂ ಆರೋಪಿಯು ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರ ಭೋಪಾಲ್‌ನ ಮಿಸ್ರೋಡ್ ಪೊಲೀಸ್ ಠಾಣೆಯ ಮುಂದೆ ಹಾಜರಾಗಬೇಕು. ಭಾರತ್ ಮಾತಾ ಕೀ ಜೈ ಘೋಷಣೆ ಕೂಗುವ ಮೂಲಕ ಠಾಣೆಯ ಮೇಲೆ ಹಾರಿಸಿರುವ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸಬೇಕು. ಇದು ಆತನಿಗೆ ತಾನು ಹುಟ್ಟಿ ಬೆಳೆದ ದೇಶದ ಬಗ್ಗೆ ಜವಾಬ್ದಾರಿ ಮತ್ತು ಹೆಮ್ಮೆಯ ಭಾವನೆಯನ್ನು ಉಂಟುಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

 

Advertisement
Next Article