ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪಿಜಿ-ಸಿಇಟಿ ಪರೀಕ್ಷೆ ಮುಂದೂಡಿಕೆ.!

08:02 AM Jun 26, 2024 IST | Bcsuddi
Advertisement

 

Advertisement

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ-ಸಿಇಟಿ) ಮುಂದೂಡಲಾಗಿದೆ.

ಈ ಮೊದಲು ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಟ‌ರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟ‌ರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭ- ವಾಗುತ್ತಿವೆ. ಹಾಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯ- ನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಹೇಳಿದ್ದಾರೆ.

ಅರ್ಜಿ ಸಲ್ಲಿಕೆ ಅವಧಿಯನ್ನೂ ವಿಸ್ತರಿಸಲಾಗಿದ್ದು, ಜುಲೈ 7ರ ಒಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಬಹುದು. ಜುಲೈ 9ರ ಸಂಜೆ 6ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಪರಿಷ್ಕೃತ ಮಾಹಿತಿಗಾಗಿ http://kea.kar.nic.in ಸಂಪರ್ಕಿಸಬಹುದು.

Tags :
ಪಿಜಿ-ಸಿಇಟಿ ಪರೀಕ್ಷೆ ಮುಂದೂಡಿಕೆ.!
Advertisement
Next Article