For the best experience, open
https://m.bcsuddi.com
on your mobile browser.
Advertisement

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತೆರಳುತ್ತಿದ್ದ ಕಾರು ಅಪಘಾತ

06:09 PM Jan 11, 2024 IST | Bcsuddi
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತೆರಳುತ್ತಿದ್ದ ಕಾರು ಅಪಘಾತ
Advertisement

ಶ್ರೀನಗರ: ಪಿಡಿಪಿ ಮುಖ್ಯಸ್ಥೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ.

ಮೆಹಬೂಬಾ ಮುಫ್ತಿ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಬೆಂಕಿ ಘಟನೆಯ ಸಂತ್ರಸ್ತರನ್ನು ಭೇಟಿ ಮಾಡಲು ಖಾನಬಾಲ್‌ಗೆ ತೆರಳಿ, ನಿಗದಿಯಾಗಿದ್ದ ಮುಂದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಮತ್ತೊಂದು ಕಾರಿಗೆ ಢಿಕ್ಕಿಯಾಗಿದೆ.

ಇನ್ನು ಕಾರಿನಲ್ಲಿದ್ದ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಬೂಬಾ ಮುಫ್ತಿ ಅವರು ಅಪಘಾತದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Author Image

Advertisement