ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪಿಯು-ಸಿಇಟಿ, ನೀಟ್ ಪರೀಕ್ಷೆಗಳಿಗೆ ತರಬೇತಿಗೆ ಹೆಸರು ನೊಂದಣಿ.!

07:41 AM Feb 22, 2024 IST | Bcsuddi
Advertisement

 

Advertisement

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆ.27 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ನೀಟ್ ಪರೀಕ್ಷೆಗಳಿಗೆ ತರಬೇತಿಗೆ ಹೆಸರು ನೊಂದಣಿ.!ಪಿಯು-ಸಿಇಟಿ
Advertisement
Next Article