ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪುಣೆಯಲ್ಲಿ ಹೆಲಿಕಾಪ್ಟರ್ ಪತನ- ಮೂವರು ಸಾವು

10:16 AM Oct 02, 2024 IST | BC Suddi
Advertisement

ಮುಂಬೈ : ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್‌ಧಾನ್‌ನಲ್ಲಿ ನಡೆದಿದೆ.

Advertisement

ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

 

Advertisement
Next Article