ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪೆನ್ ಡ್ರೈವ್ ಸೃಷ್ಟಿಸಿದ ಆರೋಪದಡಿ ಚಾಲಕನ ವಿರುದ್ಧ ಎಫ್ಐಆರ್ ದಾಖಲು

09:44 AM May 03, 2024 IST | Bcsuddi
Advertisement

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ವಿಡಿಯೊಗಳನ್ನು ಸೃಷ್ಟಿ ಮಾಡಿ ಪೆನ್‌ಡ್ರೈವ್ ಸಿದ್ಧಪಡಿಸಿದ್ದ ಆರೋಪದಡಿ, ಮಾಜಿ ಚಾಲಕ ಕಾರ್ತಿಕ್ ವಿರುದ್ಧ ಹಾಸನದ ಸೆನ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

Advertisement

ಹಾಸನ ಕ್ಷೇತ್ರದ ಜೆಡಿಎಸ್-ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯ ಚುನಾವಣೆ ಏಜೆಂಟ್ ಆಗಿರುವ ಎಂ.ಜಿ.ಪೂರ್ಣಚಂದ್ರ ತೇಜಸ್ವಿ ಅವರು ದೂರು ನೀಡಿದ್ದಾರೆ. ಹೊಳೆನರಸೀಪುರದ ಕಡವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್‌ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂದರ್ಭ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದೂರುದಾರರು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಕಾರ್ಯಕರ್ತರೊಂದಿಗೆ ಸೇರಿ ಸಂಚು ರೂಪಿಸಲಾಗಿದೆ. ಆರೋಪಿಗಳು ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಭಾವಚಿತ್ರ ಹಾಗೂ ವಿಡಿಯೊಗಳನ್ನು ಅಶ್ಲೀಲವಾಗಿ ಚಿತ್ರೀಕರಿಸಿ ಮಾರ್ಪಿಂಗ್ ಮಾಡಿ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿದ್ದಾರೆ. ಇದೇ ಫೋಟೊ ಹಾಗೂ ವಿಡಿಯೊಗಳನ್ನು ಹಲವಡೆ ಹಂಚಲಾಗಿದೆ. ರೇವಣ್ಣ ಅವರ ಹೆಸರು ಕೆಡಿಸಲು ಹಾಗೂ ಮತದಾರರು ಮತದಾನ ಮಾಡದಂತೆ ತಪ್ಪಿಸುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement
Next Article