ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥ

12:01 PM Dec 27, 2023 IST | Bcsuddi
Advertisement

ಚೆನ್ನೈ: ತಮಿಳುನಾಡು ಸಮೀಪದ ಎನ್ನೋ ರ್ ನಲ್ಲಿ ರಸಗೊಬ್ಬರ ತಯಾರಿಕಾ ಘಟಕದ ಪೈಪ್ ನಲ್ಲಿ ಅಮೋನಿಯಾ ಸೋರಿಕೆಯಾದ ಪರಿಣಾಮ ಆರು ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.

Advertisement

ಅಸ್ವಸ್ಥಗೊಂಡ ಆರು ಮಂದಿ ಚಿಕಿತ್ಸೆಯ ಬಳಿಕ ಬುಧವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ. ಕೋರಮಂಡಲ್ ಇಂಟರ್ ನ್ಯಾಷನಲ್ ಲಿಮಿಟೆಡ್ ನ ಸಮುದ್ರ ಸಮೀಪ ಹಾದು ಹೋಗಿದ್ದ ಪೈಪ್ ನಿಂದ ಅಮೋನಿಯಾ ಗ್ಯಾಸ್‌ ಸೋರಿಕೆ ಆಗಿದ್ದು, ಈ ಸಂದರ್ಭದಲ್ಲಿ ಸಮೀಪದಲ್ಲಿ ವಾಸವಾಗಿದ್ದ ನಿವಾಸಿಗಳು ಅಸ್ವಸ್ಥತೆ ಮತ್ತು ಉಸಿರಾಟದ ತೊಂದರೆ ಒಳಗಾಗಿರುವುದಾಗಿ ತಿಳಿದು ಬಂದಿದೆ.

ಸ್ಥಳೀಯರ ದೂರನ್ನು ಆಲಿಸಿದ ನಂತರ ಅಮೋನಿಯಾ ಗ್ಯಾಸ್ ಪೈಪ್ ಲೈನ್ ನಲ್ಲಿ ಸೋರಿಕೆಯಾಗುತ್ತಿರುವುದನ್ನು ಪತ್ತೆ ಹಚ್ಚಿ, ಅದನ್ನು ಸರಿಪಡಿಸಲಾಗಿದೆ ಎಂದು ತಮಿಳುನಾಡು ಪರಿಸರ ನಿಯಂತ್ರಣ ಮಂಡಳಿ ಹೇಳಿದೆ.

ಆವಡಿ ಪೊಲೀಸ್ ಕಮಿಷನರ್ ವಿಜಯ್ ಕುಮಾರ್ ಅವರು ಎಕ್ಸ್ ನಲ್ಲಿ ಮಾಹಿತಿ ನೀಡಿ, ಯಾರೂ ಕೂಡಾ ಗಾಬರಿಯಾಗಬೇಕಾಗಿಲ್ಲ. ಎನ್ನೋ ರ್ ನಲ್ಲಿನ ಅಮೋನಿಯಾ ಗ್ಯಾಸ್ ಸೋರಿಕೆ ನಿಂತಿದ್ದು, ಸ್ಥಳೀಯ ನಿವಾಸಿಗಳು ತಮ್ಮ ಮನೆಗಳಿಗೆ ತೆರಳಬಹುದಾಗಿದೆ . ಅಲ್ಲದೇ ತುರ್ತು ಸೇವೆಗಾಗಿ ಸ್ಥಳದಲ್ಲಿ ಮೆಡಿಕಲ್ ಮತ್ತು ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಆವಡಿ ಪೊಲೀಸ್ ಕಮಿಷನರ್ ವಿಜಯ್ ಕುಮಾರ್ ಅವರು ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.

Advertisement
Next Article