ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಪೊಲೀಸರ ಸಮವಸ್ತ್ರ ತೆಗೆದು ಕೇಸರಿ ಧರಿಸುವಂತೆ ಒತ್ತಾಯಿಸಿದ್ದನ್ನು ಅಶೋಕ್ ಮರೆತಿದ್ದಾರಾ?- ಡಿಕೆಶಿ ಪ್ರಶ್ನೆ

06:41 PM May 31, 2024 IST | Bcsuddi
Advertisement

ರಾಮನಗರ:ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಅಶೋಕ್ ಮರೆತುಬಿಟ್ಟಿದ್ದಾರಾ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.

Advertisement

ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೇ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆಗೆ ಎದಿರೇಟು ನೀಡಿದ್ದಾರೆ.

ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲಿಗೆ ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಉಡುಪಿ, ಬಳ್ಳಾರಿಯಲ್ಲಿ ಪೊಲೀಸರಿಗೆ ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ರಿ. ನೀವು ನಮ್ಮ ಬಗ್ಗೆ ಮಾತಮಾಡ್ತಿರಾ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಶೋಕ್ ಅವರು ಬಿಜೆಪಿ ಆಡಳಿತದಲ್ಲಿ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ಶಿವಕುಮಾರ್ ಹೇಳಿದರು.

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ  ಜೂನ್ 6 ರವರೆಗೆ ಗಡುವು ನೀಡಿರುವ ವಿಚಾರ ಕುರಿತು ಮಾತನಾಡಿ, ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಯಾಕೆ ಒಳ್ಳೆ ಮುಹೂರ್ತ ನೋಡಿ ಹೋರಾಟ ಮಾಡ್ತಾರಾ? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಾಯಿ ಬಿಡದೇ ಸುಮ್ಮನೆ ಮಾತನಾಡ್ತಾರೆ ಎಂದು ಕಿಡಿಕಾರಿದರು.

ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಮತ್ತು ಸಿಎಂ ಪರಿಶೀಲನೆ ಮಾಡ್ತಿದ್ದೇವೆ‌. ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ನೋಡಿ ಆಮೇಲೆ ಈ ಬಗ್ಗೆ ತೀರ್ಮಾನ ಮಾಡ್ತೇವೆ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು

 

Advertisement
Next Article