ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1ಲಕ್ಷ ರೂ.; ಪೋಸ್ಟರ್ ಅಂಟಿಸಿದವರು ಪೊಲೀಸ್ ವಶಕ್ಕೆ

02:47 PM May 11, 2024 IST | Bcsuddi
Advertisement

ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಪ್ರಜ್ವಲ್ ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಪ್ರಕಟಿಸಿದೆ. ಬೆಂಗಳೂರಿನ ಶಿವಾನಂದ ಸರ್ಕಲ್​ನಲ್ಲಿ ಜನತಾ ಪಕ್ಷದ ನಾಗೇಶ್ ಎಂಬಾತ ಪೋಸ್ಟರ್ ಅಂಟಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಆತನ ಜೊತೆಗೆ ಪೋಸ್ಟರ್ ಅಂಟಿಸಿದ ಇತರೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪವೆದಿದ್ದಾರೆ.

ಸದ್ಯ ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ.

 

Advertisement
Next Article