ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರಜ್ವಲ್ ರೇವಣ್ಣ ಜೂನ್ 6 ರವರೆಗೆ ಎಸ್‌ಐಟಿ ಕಸ್ಟಡಿಗೆ

05:50 PM May 31, 2024 IST | Bcsuddi
Advertisement

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

Advertisement

ಜರ್ಮನಿಯ ಮ್ಯೂನಿಕ್‌ನಿಂದ ತಡರಾತ್ರಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್‌ಐಟಿ ಕಚೇರಿಗೆ ಕರೆ ತಂದಿದ್ದರು. ಬಳಿಕ ಎಸ್‌ಐಟಿ ಕಚೇರಿಯಲ್ಲೇ ಇಡೀ ರಾತ್ರಿ ಕಳೆದ ಪ್ರಜ್ವಲ್ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.

ಈ ಎಲ್ಲಾ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಪೊಲೀಸರು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಇಂದು ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ 6 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

 

Advertisement
Next Article