For the best experience, open
https://m.bcsuddi.com
on your mobile browser.
Advertisement

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಎಸ್‌ಐಟಿ ವಶಕ್ಕೆ

10:54 AM May 29, 2024 IST | Bcsuddi
ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ  ದಿಂಬು ಎಸ್‌ಐಟಿ ವಶಕ್ಕೆ
Advertisement

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರ ಹಾಸನದ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್‌ಐಟಿ ಅಧಿಕಾರಿಗಳು ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಇಂದು ಮುಂಜಾನೆ ಪೂರ್ಣಗೊಂಡಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಹಾಗೂ ಹೊದಿಕೆಯನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ.

ಪ್ರಜ್ವಲ್ ವಿಚಾರಣೆ ವೇಳೆ ಮಹತ್ವದ ದಾಖಲೆ ಸಂಗ್ರಹಿಸಲು ಮುಂದಾದ ಎಸ್‌ಐಟಿ ತಂಡ ಸತತ ಹತ್ತು ಗಂಟೆಗಳ ಕಾಲ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಎಸ್‌ಐಟಿ ವಶಕ್ಕೆ ಪಡೆದಿದ್ದು, ಆ ವಸ್ತುಗಳನ್ನು ಬೆಂಗಳೂರಿಗೆ ತನಿಖೆಗಾಗಿ ತರುತ್ತಿದೆ.

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಾಸ್ಸಾಗುವ ಬಗ್ಗೆ ಹಾಗೂ ಎಸ್‌ಐಟಿ ಮುಂದೆ ಹಾಜರಾಗುವ ಬಗ್ಗೆ ವಿದೇಶದಿಂದಲೇ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಇದೀಗ ಪ್ರಜ್ವಲ್ ವಾಪಾಸ್ಸಾಗುವ ದಿನಾಂಕ ಸಮೀಪಿಸುತ್ತಿದ್ದಂತೆ ಎಸ್‌ಐಟಿ ತಂಡ ಹಾಸನದ ಸಂಸದರ ನಿವಾಸದಲ್ಲಿ ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದೆ.

Advertisement

Author Image

Advertisement