For the best experience, open
https://m.bcsuddi.com
on your mobile browser.
Advertisement

ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

07:24 AM May 05, 2024 IST | Bcsuddi
ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: 2024-25ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು "ಆಯ್ಕೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ 5ನೇ ತರಗತಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ swd.kar.nic.in  ಆನ್‍ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಮೇ 9 ರಿಂದ ಮೇ21 ರ ವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಷರತ್ತುಗಳು: ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು. ನಿಗಧಿಪಡಿಸಲಾದ ಗುರಿಯಲ್ಲಿ ಬಾಲಕಿಯರಿಗೆ ಶೇ50ರಷ್ಟು ಮೀಸಲಾತಿ ಇರುತ್ತದೆ. ವಿದ್ಯಾರ್ಥಿಗಳು ಪ್ರತಿಷ್ಟಿತ ಶಾಲೆಗಳ ಆಯ್ಕೆ ಕೋರಿ ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು. ಒಂದೇ ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸಲಾಗುವುದು. 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಪೋಷಕರು ನಿಗಧಿತ ಅರ್ಜಿಯೊಂದಿಗೆ 04 ಪಾರ್ಸ್ ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ (progress card)  ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್. ಇತ್ಯಾದಿ ಅಗತ್ಯ ನಕಲು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Tags :
Author Image

Advertisement