ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರಾಣ ಪ್ರತಿಷ್ಠೆ ಎಂದರೇನು? ವಿಗ್ರಹದ ಕಣ್ಣು ತೆರೆಯುವುದು ಹೇಗೆ?

12:13 PM Jan 22, 2024 IST | Bcsuddi
Advertisement

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ. ಶಬರಿ ಕಾದಂತೆ ಅಸಂಖ್ಯ ಭಾರತೀಯರು 500 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದ್ದು ಕನಸು ನನಸಾಗುವ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.

Advertisement

ಮಧ್ಯಾಹ್ನ 12.20ರಿಂದ 12.45ರ ಅವಧಿಯಲ್ಲಿ ಅಭಿಜಿತ್ ಮಹೂರ್ತದಲ್ಲಿರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಐವರು ಮಾತ್ರ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಲಿದ್ದಾರೆ.

ಪ್ರಾಣಪ್ರತಿಷ್ಠಾಪನೆ ನೆರವೇರಿದ ಬಳಕ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.

ಪ್ರಾಣ ಪ್ರತಿಷ್ಠೆ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಒಟ್ಟು ಹತ್ತು ಹಂತಗಳಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ೬ ಹಂತದಲ್ಲಿ ವಿಗ್ರಹದ ಕಣ್ಣು ತೆರೆಯಲಾಗುತ್ತದೆ. ಬಳಿಕ ಪ್ರಧಾನಿ ಮೋದಿಯವರು ವಿಗ್ರಹಕ್ಕೆ ಕಾಡಿಗೆ ಶಾಸ್ತ್ರ ನೆರವೇರಿಸಲಿದ್ದಾರೆ. ಇದಾದ ಬಳಿಕ ಪ್ರಾರ್ಥನೆ ನೆರವೇರಲಿದೆ.

Advertisement
Next Article