For the best experience, open
https://m.bcsuddi.com
on your mobile browser.
Advertisement

ಪ್ರೇಯಸಿ ಜೊತೆ ಐಷಾರಾಮಿ ಜೀವನ ನಡೆಸಲು ಮನೆಗಳ್ಳತನಕ್ಕೆ ಇಳಿದ ಪ್ರೇಮಿ ಅಂದರ್!

11:39 AM Sep 06, 2024 IST | BC Suddi
ಪ್ರೇಯಸಿ ಜೊತೆ ಐಷಾರಾಮಿ ಜೀವನ ನಡೆಸಲು ಮನೆಗಳ್ಳತನಕ್ಕೆ ಇಳಿದ ಪ್ರೇಮಿ ಅಂದರ್
Advertisement

ಬೆಂಗಳೂರು : ಪ್ರೇಯಸಿಯ ಜೊತೆ ಐಷಾರಾಮಿ ಜೀವನ ಕಳೆಯುವ ಸಲುವಾಗಿ ಕಳ್ಳತನಕ್ಕೆ ಇಳಿದಿದ್ದ ಖತರ್ನಾಕ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಹಾಡುಹಗಲೇ ಮನೆ ಕಳ್ಳತನ ಮಾಡುತ್ತಿದ್ದು, ಆರೋಪಿಯನ್ನು ಜಿಗಣಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆನೇಕಲ್ ತಾಲೂಕಿನ ವಾಬಸಂದ್ರದಲ್ಲಿ ಮನೆ ಕಳ್ಳತನವಾಗಿತ್ತು. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಆರೋಪಿಯಿಂದ 8 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ. ಜಿಗಣಿ ಸಿ.ಪಿ.ಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಲಕ್ಷ್ಮಣ್ ಅಲಿಯಾಸ್‌ ಗುನ್ನಿ ಎಂಬಾತನನ್ನು ಬಂಧಿಸಿದ್ದಾರೆ.

ಚಿಕ್ಕದಾಸರಹಳ್ಳಿಯ ಲಕ್ಷ್ಮಣ್ ವಿರುದ್ಧ ಈಗಾಗಲೇ ಬನ್ನೇರುಘಟ್ಟ ,ಜಿಗಣಿ, ಸರ್ಜಾಪುರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ವಿಚಾರಣೆ ವೇಳೆ ತನ್ನ ಪ್ರಿಯತಮೆ ಜತೆ ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದೆ ಎಂದು ಲಕ್ಷ್ಮಣ್ ಒಪ್ಪಿಕೊಂಡಿದ್ದಾನೆ. ಕದ್ದ ಚಿನ್ನ ಬೆಳ್ಳಿ ಮಾರಾಟ ಮಾಡಿ ಪ್ರೇಯಸಿಗೆ ಖರ್ಚು ಮಾಡುತ್ತಿದ್ದ. ತನಿಖೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಸದ್ಯ ಈ ಐನಾತಿ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement