ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಫೆ.27 ರಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಚುನಾವಣಾ ಆಯೋಗ

05:39 PM Jan 29, 2024 IST | Bcsuddi
Advertisement

ನವದೆಹಲಿ: ಕರ್ನಾಟಕದ 4 ಸ್ಥಾನ ಸೇರಿ '15 ರಾಜ್ಯಗಳ 56 ಸ್ಥಾನ'ಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Advertisement

ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. ೧೫ ರಂದು ಕೊನೆಯ ದಿನವಾಗಿದ್ದು, ಮತದಾನ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ  ನಡೆಯಲಿದೆ ಎಂದು ವರದಿಯಾಗಿದೆ.

ಇನ್ನು ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.

 

Advertisement
Next Article