ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಗರ್‌ ಹುಕುಂ ಜಮೀನು ರೈತರಿಗೆ ಮುಖ್ಯ ಮಾಹಿತಿ.!

07:54 AM Jul 07, 2024 IST | Bcsuddi
Advertisement

ಮೈಸೂರು : ರಾಜ್ಯದ 163 ತಾಲೂಕುಗಳಲ್ಲಿ ಬಗರ್‌ ಹುಕುಂ ಸಮಿತಿ ರಚಿಸಲಾಗಿದ್ದು, ಸಮಿತಿಗಳಿಗೆ 4.38 ಎಕರೆಗಿಂದ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ 10 ವರ್ಷದ ಸ್ಯಾಟಲೈಟ್‌ ಇಮೇಜ್‌ ಒದಗಿಸಲಾಗುವುದು. ಇದರ ಆಧಾರದಲ್ಲಿ ಸಾಗುವಳಿ ಬಗ್ಗೆ ಖಾತರಿ ಪಡಿಸಿಕೊಂಡು, ಬೋಗಸ್‌ ಅರ್ಜಿಗಳಿಗೆ ಅವಕಾಶ ನೀಡದಂತೆ ಅರ್ಹ ರೈತರಿಗೆ ಭೂ ಮಂಜೂರು ಮಾಡಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಬಡ ರೈತರಿಗೆ ಶೇ.100 ನೆಮ್ಮದಿ ನೀಡಬೇಕು ಮುಂದಿನ ದಿನಗಳಲ್ಲಿ ಅವರ ದಾಖಲೆಗಳ ಬಗ್ಗೆ ಸಾಸಿವೆ ಕಾಳಿನಷ್ಟೂ ಅನುಮಾನ ಇರಬಾರದು, ಕೋರ್ಟ್‌ ಕಚೇರಿ ಸುತ್ತುವಂತೆ ಆಗಬಾರದು ಎಂಬುದು ನಮ್ಮ ಉದ್ದೇಶ. ಹೀಗಾಗಿ ಬಗರ್‌ ಹುಕುಂ ಜಮೀನನ್ನು ದುರಸ್ಥಿಗೊಳಿಸಿ ಹೊಸ ಹಿಸ್ಸಾ ನಂಬರ್‌ ಜೊತೆಗೆ ಸಾಗುವಳಿ ಚೀಟಿಯನ್ನು ಡಿಜಿಟಲೀಕರಣ ಗೊಳಿಸಿ ನೀಡಬೇಕು ಹಾಗೂ ಭೂಮಿಯನ್ನು ಕ್ರಮ (ರಿಜಿಸ್ಟರ್) ಮಾಡಿ ರೈತರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

Tags :
ಬಗರ್‌ ಹುಕುಂ ಜಮೀನು ರೈತರಿಗೆ ಮುಖ್ಯ ಮಾಹಿತಿ.!
Advertisement
Next Article