ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ' -ನಿರ್ಮಲಾ ಸೀತಾರಾಮನ್

02:16 PM Jul 24, 2024 IST | Bcsuddi
Advertisement

ನವದೆಹಲಿ: ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ  ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Advertisement

ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ  ಕುರಿತು  ರಾಜ್ಯಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಪ್ರತಿ ಬಜೆಟ್‌ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು.

ಮಹಾರಾಷ್ಟದ ಪಾಲ್ಘರ್ ಜಿಲ್ಲೆಯ ವಂಧವನ್ ಎಂಬ ಪಟ್ಟಣದಲ್ಲಿ ಬಂದರು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಆದರೆ ಮಂಗಳವಾರದ ತನ್ನ ಬಜೆಟ್ ಭಾಷಣದಲ್ಲಿ ರಾಜ್ಯದ ಹೆಸರನ್ನು ಉಲ್ಲೇಖಿಸಿಲ್ಲ. ಇದರರ್ಥ ಮಹಾರಾಷ್ಟವನ್ನು ಕಡೆಗಣಿಸಲಾಗಿದೆ ಎಂದರ್ಥವೇ ಎಂದು ಪ್ರಶ್ನಿಸಿದರು.

ಭಾಷಣದಲ್ಲಿ ನಿರ್ದಿಷ್ಟ ರಾಜ್ಯವನ್ನು ಹೆಸರಿಸಿದರೆ, ಭಾರತ ಸರ್ಕಾರದ ಕಾರ್ಯಕ್ರಮಗಳು ಈ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ? ಇದು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನಮ್ಮ ರಾಜ್ಯಗಳಿಗೆ ಏನನ್ನೂ ನೀಡಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿಸಲು ಹೀಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

 

Advertisement
Next Article