ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬನ್ನೇರುಘಟ್ಟ ಜೈವಿಕ ಉದ್ಯಾನದ ಸಿಂಹ'ರಾಮ'ಇನ್ನಿಲ್ಲ

09:31 AM Nov 17, 2023 IST | Bcsuddi
Advertisement

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ರಾಮ (14) ಎಂಬ ಹೆಸರಿನ ಸಿಂಹವೊಂದು ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ.

Advertisement

2010ರಲ್ಲಿ ಸಿಂಹ ಗಣೇಶ ಮತ್ತು ಸಿಂಹಿಣಿ ಅನುಗೆ ಜನಿಸಿದ ಸಿಂಹವಾಗಿದ್ದು ಅಂದಿನಿಂದ ರಾಮ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ಇತ್ತು. ಬುಧವಾರದಂದು ಬೆಳಗ್ಗಿನ ವೇಳೆ ರಾಮನಿಗೆ ಇದ್ದಕ್ಕಿದ್ದಂತೆ ವಾಂತಿಯ ಲಕ್ಷಣಗಳು ಕಾಣಿಸಿಕೊಂಡು ನಿಶ್ಯಕ್ತಿಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಕೂಡಲೇ ಬನ್ನೇರುಘಟ್ಟ ಪಶುವೈದ್ಯರ ತಂಡ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ರು. ಆದ್ರೆ ಅಂತಿಮವಾಗಿ ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಿದ್ದು ಬಹು ಅಂಗಾಂಗ ವೈಫಲ್ಯವಾಗಿರುವುದು ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಇದರ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಹೆಚ್ಚಿನ ಪರೀಕ್ಷೆಗಾಗಿ IAH & VB ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Advertisement
Next Article