ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಳ್ಳಾರಿಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ- ನಟಿ ಶ್ರೀಲೀಲಾ ಸಾಥ್‌

10:00 AM Jun 21, 2024 IST | Bcsuddi
Advertisement

ಬಳ್ಳಾರಿ:10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ ಯೋಗ ಪ್ರದರ್ಶನ ಮಾಡಿದರು.

Advertisement

ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು. ನಟಿ ಶ್ರೀಲೀಲಾ, ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್‌ ನೀಡಿದರು.

ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ಅವಧೂತ ವಿನಯ್ ಗುರೂಜಿ ಅವರು ಯೋಗ ಕಾರ್ಯಕ್ರಮ ನಿರ್ವಹಣೆ ಮಾಡಿದರು. ವಿವಿಧ ಯೋಗಾಸನಗಳ ಸೂಚನೆ ನೀಡುತ್ತಾ, ತಾವೂ ಯೋಗ ಆಸನಗಳ ಪ್ರದರ್ಶನ ನಡೆಸಿಕೊಟ್ಟರು. ಇದೇ ವೇಳೆ ಸಾಂಪ್ರದಾಯಿಕವಾಗಿ ಪಂಚೆ ಶಲ್ಯ ಧರಿಸಿದ್ದ ಸಿದ್ದರಾಮಯ್ಯ ಅವರು ವಚನಾನಂದ ಶ್ರೀಗಳ ಸೂಚನೆಯಂತೆ ಏಕಾಗ್ರತೆಯಿಂದ ಯೋಗ ಪ್ರದರ್ಶನ ಮಾಡಿದರು. . ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳೂ ಪಾಲ್ಗೊಂಡಿದ್ದರು.

ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ.

 

Advertisement
Next Article