ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

11:24 AM Jun 20, 2024 IST | Bcsuddi
Advertisement

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಅವರು, 2014ರಿಂದ ಬಿಎಂಟಿಸಿ 4 ವರ್ಷದಿಂದ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆಯಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸುತ್ತೇವೆ. ಶಕ್ತಿ ಗ್ಯಾರಂಟಿ ಯೋಜನೆಯ 1,100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಸೆಪ್ಟೆಂಬರ್ 15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್‌ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದಿದ್ದಾರೆ.

Advertisement
Next Article