ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಸ್ ಮೇಲೆ ಬಿದ್ದ ಹೈಟೆನ್ಷನ್ ವಿದ್ಯುತ್‌ ತಂತಿ - 10ಕ್ಕೂ ಹೆಚ್ಚು ಮಂದಿ ಸಜೀವ ದಹನ

05:59 PM Mar 11, 2024 IST | Bcsuddi
Advertisement

ಲಕ್ನೋ:ಮದುವೆಗೆ ತೆರಳುತ್ತಿದ್ದ ಬಸ್‌ ಮೇಲೆ 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್‌ ತಂತಿ ಬಿದ್ದು ಬಸ್‌ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

Advertisement

ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 36 ಜನ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Next Article