For the best experience, open
https://m.bcsuddi.com
on your mobile browser.
Advertisement

ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್

11:51 AM May 14, 2024 IST | Bcsuddi
ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್
Advertisement

ದಿಸ್ಪುರ್‌:  ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಗುವಾಹಟಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಶಂಕಿತರನ್ನು ಬಹರ್ ಮಿಯಾ (30) ಮತ್ತು ರಾಸೆಲ್ ಮಿಯಾ (40) ಎಂದು ಗುರುತಿಸಲಾಗಿದೆ.

ಬಂಧಿತರು ನಿಷೇಧಿತ ಅಲ್ ಖೈದಾ(ಎಕ್ಯೂಐಎಸ್) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಬಂಧಿತರು, ಅನ್ಸರುಲ್ಲಾ ಬಾಂಗ್ಲಾ ತಂಡ (ಎಬಿಟಿ)ಗೆ ಸೇರಿದವರು. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸುವ ನಿಟ್ಟಿನಲ್ಲಿ ಬಾಂಗ್ಲಾ ದೇಶದಿಂದ ಬಂದು ಗುವಾಹಟಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

Advertisement

ಪಾಸ್‍ಪೋರ್ಟ್ ಇಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಆರೋಪಿಗಳು, ಭಾರತೀಯ ದಾಖಲೆಗಳನ್ನು ಕೂಡ ಪಡೆದುಕೊಂಡಿದ್ದರು. ಇವರು ಅಸ್ಸಾಂನಲ್ಲಿ ಭಯೋತ್ಪಾದನಾ ಜಾಲವನ್ನು ಹರಡುವ ಉದ್ದೇಶ ಹೊಂದಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author Image

Advertisement