ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಾಕ್ಸ್‌ ಆಫೀಸ್‌ನಲ್ಲಿ 'ಮಂಜುಮ್ಮೇಲ್ ಬಾಯ್ಸ್' ಆರ್ಭಟ - 200 ಕೋಟಿ ಕ್ಲಬ್ ಸೇರಿದ ಮೊದಲ ಮಲಯಾಳಂ ಚಿತ್ರ

05:18 PM Mar 21, 2024 IST | Bcsuddi
Advertisement

'ಮಂಜುಮ್ಮೇಲ್ ಬಾಯ್ಸ್' ಮಲಯಾಳಂ ಸಿನಿಮಾ ಸೂಪರ್‌ ಹಿಟ್ ಆಗಿದ್ದು, ಇಲ್ಲಿಯವರೆಗೆ ಬಾಕ್ಸ್‌ ಆಫೀಸ್‌ನಲ್ಲಿ 200 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಕಳೆದ ತಿಂಗಳು ಫೆಬ್ರವರಿ 22ರಂದು ರಿಲೀಸ್ ಆದ ಮಲಯಾಳಂನ 'ಮಂಜುಮ್ಮೇಲ್ ಬಾಯ್ಸ್' ಸಿನಿಮಾ 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಮಲಯಾಳಂ ಚಿತ್ರರಂಗದಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ ಅನ್ನೋದು ವಿಶೇಷ. ನೈಜ ಘಟನೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜನರಿಗೆ ಇಷ್ಟ ಆಗಿದೆ. ಈ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕ ಚಿದಂಬರಮ್ ಮಾಡಿದ್ದಾರೆ. 'ಮಂಜುಮ್ಮೇಲ್ ಬಾಯ್ಸ್' ಸಿನಿಮಾ ಮಲಯಾಳಂ ಮಾತ್ರವಲ್ಲದೆ ತಮಿಳಿನಲ್ಲೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವಿಶವಾದ್ಯಂತ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಿಂದಲೇ ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಹರಿದು ಬಂದಿದೆ. 'ಮಂಜುಮ್ಮೇಲ್ ಬಾಯ್ಸ್' ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ನಿರ್ಮಾಣ ಮಾಡಿದ್ದಾರೆ.

Advertisement

Advertisement
Next Article