For the best experience, open
https://m.bcsuddi.com
on your mobile browser.
Advertisement

ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್ ಸೋರಿಕೆ : ಯುವತಿ ಮೃತ್ಯು

04:58 PM Dec 25, 2023 IST | Bcsuddi
ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್ ಸೋರಿಕೆ   ಯುವತಿ ಮೃತ್ಯು
Advertisement

ಬೆಂಗಳೂರು: ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್ ಸೋರಿಕೆಯಾದ ಪರಿಣಾಮ ಯುವತಿ ವಿಷ ಅನಿಲ ಸೇವಿಸಿ ಮೃತಪಟ್ಟ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ನಡೆದಿದೆ. ರಾಜೇಶ್ವರಿ (23) ಘಟನೆಯಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ರಾಜೇಶ್ವರಿ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅಣ್ಣನ ಮದುವೆಗೆ ರಜೆ ಹಾಕಿದ್ದಳು.ಡಿ. 25 ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ರಾಜೇಶ್ವರಿರವರು ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್‌ ರೂಮ್‌ ಬಾಗಿಲು ಒಡೆದು ನೋಡಿದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಆಸ್ಪತ್ರೆಗೂ ಸಾಗಿಸುವ ಮೊದಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Author Image

Advertisement