For the best experience, open
https://m.bcsuddi.com
on your mobile browser.
Advertisement

ಬಾಲಿವುಡ್‌ ನಟಿ ಪೂನಾಂ ಪಾಂಡೆ ವಿರುದ್ಧ ಎಫ್‌ಐಆರ್‌ ದಾಖಲು

11:34 AM Feb 05, 2024 IST | Bcsuddi
ಬಾಲಿವುಡ್‌ ನಟಿ ಪೂನಾಂ ಪಾಂಡೆ ವಿರುದ್ಧ ಎಫ್‌ಐಆರ್‌ ದಾಖಲು
Advertisement

ಮುಂಬೈ:ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ನಿಧನದ ಸುದ್ದಿ ಪ್ರಚಾರ ಮಾಡಿದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲಿ ಕಾಶಿಪ್ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು , ಆಕ್ರೋಶಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪ ಮಾಡಲಾಯಿತು. ಈ ಬಗ್ಗೆ ಇನ್ಸ್ಟಾದಲ್ಲಿ ಪೋಸ್ಟ್‌ ಮಾಡಿದ ಅವರು , ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್  ನಲ್ಲಿ ಬರೆದುಕೊಂಡಿದ್ದಾರೆ .

Advertisement

Author Image

Advertisement