ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಾಲಿವುಡ್ ನಟಿ ಮೀರಾ ಚೋಪ್ರಾ - ವೆಡ್ಡಿಂಗ್‌ ಕಾರ್ಡ್‌ ವೈರಲ್‌

05:17 PM Mar 09, 2024 IST | Bcsuddi
Advertisement

ಮುಂಬೈ: ಕನ್ನಡದ ಅರ್ಜುನ್ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನಟಿ ಮೀರಾ ಚೋಪ್ರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

Advertisement

ಎರಡು ದಿನಗಳ ಕಾಲ ನಡೆಯಲಿರುವ ನಟಿಯ ಮದುವೆಗೆ ಒಟ್ಟು ಆರು ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದ್ದು, ಅಷ್ಟೂ ಕಾರ್ಡ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಮುಂಬೈ ಬೆಡಗಿ, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಇದೇ ಮಾರ್ಚ್ 11, 12ರಂದು ಹಸೆಮಣೆ ಏರಲಿದ್ದಾರೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ.ಮೀರಾ ಚೋಪ್ರಾ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು.

1920 ಲಂಡನ್, ಸೆಕ್ಷನ್ 375, ಕಾಮಾತಿಪುರ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ಸಫೇದ್, ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

Advertisement
Next Article