ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

10:35 AM Apr 14, 2024 IST | Bcsuddi
Advertisement

ಮುಂಬೈ : ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಸಂಭವಿಸಿದೆ.
ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Advertisement

ಬೈಕ್‌ನಲ್ಲಿ ಬಂದ ಇಬ್ಬರು ಶೂಟರ್‌ಗಳು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸದ್ಯ ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ದ್ದಾರೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಹೇಳಿದ್ದರು. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು

Advertisement
Next Article